ಭಾರತದ ರಾಷ್ಟ್ರೀಯ ಹೆಮ್ಮೆಯಾದ, ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಬಯಸುತ್ತಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. DRDOನ ಜೈವಿಕ ಭದ್ರತೆಯ ತಾಂತ್ರಿಕತೆಗಳ ರಕ್ಷಣಾ ಸಂಸ್ಥೆಯು (DIBT) ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳು ವಿಶೇಷವಾಗಿ ಬಯೋ-ಡಿಫೆನ್ಸ್, ಲೈಫ್ ಸೈನ್ಸ್, ಬಯೋಟೆಕ್ನಾಲಜಿ, ಮೈಕ್ರೋಬಯಾಲಜಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡಲು ಆಸಕ್ತಿ ಹೊಂದಿರುವ ಯುವ ವಿಜ್ಞಾನಿಗಳು ಹಾಗೂ ಪದವೀಧರರಿಗೆ ಸೂಕ್ತವಾಗಿವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು ಅಕ್ಟೋಬರ್ 28 ರ ಒಳಗೆ ತಲುಪುವಂತೆ ಆಪ್ ಲೈನ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ .
ಜೂನಿಯರ್ ರಿಸರ್ಚ್ ಫೆಲೋ (ಪಾಲಿಮರ್ ಸೈನ್ಸ್/ಪಾಲಿಮರ್ ಕೆಮಿಸ್ಟ್ರಿ/ಕೆಮಿಸ್ಟ್ರಿ) – ರೂ.37,000/-
ಜೂನಿಯರ್ ರಿಸರ್ಚ್ ಫೆಲೋ (ಆಹಾರ ವಿಜ್ಞಾನ ಮತ್ತು ಪೋಷಣೆ/ಆಹಾರ ತಂತ್ರಜ್ಞಾನ/ಆಹಾರ ಸಂಸ್ಕರಣಾ ಎಂಜಿನಿಯರಿಂಗ್) – ರೂ.37,000/-
ರಿಸರ್ಚ್ ಅಸೋಸಿಯೇಟ್ – ರೂ.67,000/-
ಅರ್ಜಿ ಸಲ್ಲಿಸುವ ವಿಧಾನ:
DRDO DIBT ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. (ಅಧಿಸೂಚನೆಯ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ)
ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್ ಮತ್ತು ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ನಿಮಗೆ ಸಂಬಂಧಿಸಿದ DRDO DIBT ವಿಭಾಗವನ್ನು ಆಯ್ಕೆಮಾಡಿ.
ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸಿದರೆ ಶುಲ್ಕವನ್ನು ಪಾವತಿ ಮಾಡಿ, ದಾಖಲೆಗಳನ್ನು ಸಲ್ಲಿಸಲು ಮರೆಯದಿರಿ.
ನೀವು ಒದಗಿಸುತ್ತಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರೀಕ್ಷಿಸಿಕೊಳ್ಳಿ.
ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ – ಮುಖ್ಯ ನಿರ್ದೇಶಕರು, DIBT-DRDO, ಸಿದ್ಧಾರ್ಥನಗರ, ಮೈಸೂರು-570011 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) ದಿನಾಂಕ 28-ಅಕ್ಟೋಬರ್-2025 ರ ಒಳಗಾಗಿ ತಲುಪುವಂತೆ ಕಳುಹಿಸಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.