ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ ನ ರಿಕ್ವರ್ಮೆಂಟ್ ಅಂಡ್ ಅಸೆಸ್ಮೆಂಟ್ ಸೆಂಟರ್ ನಲ್ಲಿ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ(DRDO RAC Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
DRDO ದ DRDS ಕೇಡರ್‌ನಲ್ಲಿ ವಿಜ್ಞಾನಿ ಹುದ್ದೆಗಳಿಗೆ RAC ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 21 ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ rac.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Recruitment and Assessment Centre (RAC) Recruitment Body – Defence Research and Development Organization Post Name – SCIENTISTS Total Vacancy – 21 Application Process – Online Job Location – Timarpur, Delhi
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -09-05-2025
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಮತ್ತು ವೃತ್ತಿಅನುಭವ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ಹಾಗೂ ವೃತ್ತಿಅನುಭವ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
BE/BTech in Related Discipline.
ವಯೋಮಿತಿ:
ದಿನಾಂಕ 09-05-2025 ರಂತೆ ಸೈಂಟಿಸ್ಟ್ ಎಫ್ ಹುದ್ದೆಗೆ – ಗರಿಷ್ಠ 50 ವರ್ಷಗಳು
ಸೈಂಟಿಸ್ಟ್ ಡಿ ಹುದ್ದೆಗೆ – ಗರಿಷ್ಠ 50 ವರ್ಷಗಳು
ಸೈಂಟಿಸ್ಟ್ ಹುದ್ದೆಗೆ – ಗರಿಷ್ಠ 50 ವರ್ಷಗಳು
ಸೈಂಟಿಸ್ಟ್ ಸಿ ಹುದ್ದೆಗೆ – ಗರಿಷ್ಠ 40 ವರ್ಷಗಳು
ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಸಂದರ್ಶನ
ದಾಖಲೆ ಪರಿಶೀಲನೆ
ಅರ್ಜಿ ಶುಲ್ಕ:
ಸಾಮಾನ್ಯ / ಓಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂ.
ಎಸ್ಸಿ / ಎಸ್ಟಿ /ದಿವ್ಯಾಂಗ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for DRDO RAC Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
RAC DRDO ಅಧಿಕೃತ ವೆಬ್ಸೈಟ್ rac.gov.inಗೆ ಭೇಟಿ ನೀಡಿ.
DRDO ದ DRDS ಕೇಡರ್‌ನಲ್ಲಿ ವಿಜ್ಞಾನಿ ಹುದ್ದೆಗಳಿಗೆ RAC ಅರ್ಜಿಗಳನ್ನು ಆಹ್ವಾನಿಸುತ್ತದೆ ಇಲ್ಲಿ ಅರ್ಜಿ ಸಲ್ಲಿಸಿ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.