ಕಲಬುರಗಿ ಜಿಲ್ಲೆಯಲ್ಲಿ ಪೌರಕಾರ್ಮಿಕರ ನೇರ ನೇಮಕಾತಿ

ಅರ್ಜಿ ಸಲ್ಲಿಸಲು ಏ.01 ಕೊನೆದಿನ

Published on:

ಕಲಬುರಗಿ: ಜಿಲ್ಲೆಯ ಶಹಬಾದ್ ನಗರಸಭೆಯ ವ್ಯಾಪ್ತಿಯಲ್ಲಿ 42 ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ ಅರ್ಜಿ ಆಹ್ವಾನಿಸಿದೆ.

ಸದರಿ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ತಿಳಿದಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 01ರ ಸಂಜೆ 5.30 ಗಂಟೆಯವರೆಗೆ ಅವಕಾಶವಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಶಹಬಾದ್ ನಗರಸಭೆ ಕಚೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ನಿಗದಿತ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮಾರ್ಚ್ 18, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 01, 2026

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ ಹಾಗೂ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ತಿಳಿದಿರಬೇಕು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಶಹಬಾದನಲ್ಲಿ ಪೌರಕಾರ್ಮಿಕರಾಗಿ ಹೊರಗುತ್ತಿಗೆ/ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಕನಿಷ್ಠ 01 ವರ್ಷ ಪೌರಕಾರ್ಮಿಕರಾಗಿ, ಲೋಡರ್ಸ್/ಯುಜಿಡಿ ಹೆಲ್ಪರ್ಸ್, ತ್ಯಾಜ್ಯ ಸಂಸ್ಕರಣ ಘಟಕ, ಸಾರ್ವಜನಿಕ ನಿರ್ವಹಣೆ ಶೌಚಾಲಯ, ಶೂನ್ಯ ತ್ಯಾಜ್ಯ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ/ಕಾರ್ಯನಿರ್ವಹಿಸಿದವರಾಗಿರಬೇಕು.

• ಅರ್ಜಿ ಸಲ್ಲಿಸುವ ಅಭ್ಯರ್ಥಿಯು “ಪೌರಕಾರ್ಮಿಕರಾಗಿ ಹೊರಗುತ್ತಿಗೆ/ ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವಾಗ ಕೋವಿಡ್-19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಅಥವಾ ಇತರೆ ಕಾರಣಗಳಿಂದಾಗಿ ಮರಣ ಹೊಂದಿರುವ” ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಬಹುದು.

• ಮ್ಯಾನ್ಯುಯಲ್ ಸ್ಯಾವೆಂಜರ್ ಅಧಿನಿಯಮದಡಿ ಗುರುತಿಸಲ್ಪಟ್ಟ ಸಂತ್ರಸ್ಥರುಗಳು ಅಥವಾ ಅವರ ಕುಟುಂಬದ ಸದಸ್ಯರು (ಗಂಡ, ಹೆಂಡತಿ, ಮಗ/ಮಗಳು) ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಠ ಮಿತಿ 18 ವರ್ಷಗಳು
ಗರಿಷ್ಠ ಮಿತಿ 50 ವರ್ಷಗಳು

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

• ಅಭ್ಯರ್ಥಿಗಳ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ (03)

• ಜನ್ಮ ದಿನಾಂಕದ ದೃಢೀಕರಣಕ್ಕಾಗಿ ವರ್ಗಾವಣೆ ಪ್ರಮಾಣ ಪತ್ರ/ಜನನ ಪ್ರಮಾಣ ಪತ್ರ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ (EPIC)/ಗುರುತಿನ ಚೀಟಿ

• ನಗರಸಭೆಯಲ್ಲಿ ಪೌರಕಾರ್ಮಿಕರಾಗಿ 01 ವರ್ಷಕ್ಕಿಂತ ಕಡಿಮೆ ಇಲ್ಲದೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ/ಕಾರ್ಯನಿರ್ವಹಿಸಿದ ದೃಢೀಕತ (ಪೌರಾಯುಕ್ತರಿಂದ) ದಾಖಲೆ.

• ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾದ ಇ.ಎಸ್.ಐ, ಪಿ.ಎಫ್, ಹಾಜರಾತಿ ಮತ್ತು ವೇತನ ಪಡೆದ 01 ವರ್ಷಗಳ ದೃಢೀಕತ (ಪೌರಾಯುಕ್ತರಿಂದ) ದಾಖಲೆ.

• ಸೇವಾ ಪ್ರಮಾಣ ಪತ್ರ, ದಾಖಲೆ ಇತ್ಯಾದಿ ಅಗತ್ಯ ದಾಖಲಾತಿಗಳು…

ಆಯ್ಕೆ ವಿಧಾನ:

ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನಿಯಮಗಳ ಅನುಸಾರ ಅಭ್ಯರ್ಥಿಗಳನ್ನು ನೇರ ಪಾವತಿಯಡಿಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯನ್ವಯ ವೇತನ ಹಾಗೂ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ಪರಿಷ್ಕರಿಸುವ ವೇತನದೊಂದಿಗೆ ಪಿ.ಎಫ್ ಮತ್ತು ಇ.ಎಸ್.ಐ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ ಸಲ್ಲಿಸುವ ಬಗೆ…

• ಮೇಲಿನ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಶಹಬಾದ್ ನಗರಸಭೆ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಅರ್ಜಿ ಲಕೋಟೆಯ ಮೇಲೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ.

• ಅರ್ಜಿಯನ್ನು *ನೇರಪಾವತಿ ನೇಮಕಾತಿ ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಕಲಬುರಗಿ ಜಿಲ್ಲೆ ಇವರ ಪರವಾಗಿ ಪೌರಾಯುಕ್ತರು ನಗರಸಭೆ ಶಹಬಾದ* ರವರಿಗೆ ಏಪ್ರಿಲ್ 01 ಸಂಜೆ 5:30 ರೊಳಗೆ ತಲುಪುವಂತೆ ಸಲ್ಲಿಸಬಹುದು.

Important Direct Links:

Official Notification PDFDownload
Official Websiteshahabadcmc.mrc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

5 thoughts on “ಕಲಬುರಗಿ ಜಿಲ್ಲೆಯಲ್ಲಿ ಪೌರಕಾರ್ಮಿಕರ ನೇರ ನೇಮಕಾತಿ”

Leave a Comment