ವಿಕಲಚೇತನ ಅಭ್ಯರ್ಥಿಗಳಿಗೆ ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯಗಳನ್ನು ನೀಡಲು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿಗೆ ಒಟ್ಟು 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ನೇರ ನಗದು ವರ್ಗಾವಣೆ(ಡಿ.ಬಿ.ಟಿ) ಮೂಲಕ ಫಲಾನುಭವಿಗಳಿಗೆ ಹಣ ಜಮೆ ಆಗಲಿದೆ. ಅರ್ಹ ವಿಕಲಚೇತನ ಅಭ್ಯರ್ಥಿಗಳು https://sevasindhu.karnataka.gov.in/ಗೆ ಭೇಟಿ ನೀಡುವ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಕೋರಿದ್ದಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 28, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 30, 2025 ಯೋಜನೆಗಳ ವಿವರ: ಆಧಾರ ಯೋಜನೆ. ವೈದ್ಯಕೀಯ ಪರಿಹಾರ ನಿಧಿ ಯೋಜನೆ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ ನಿರುದ್ಯೋಗ ಭತ್ಯೆ ಶಿಶುಪಾಲನ ಭತ್ಯೆ ಮರಣ ಪರಿಹಾರ ನಿಧಿ ಪ್ರತಿಭೆ ಯೋಜನೆ ಅಂಧ ವಿದ್ಯಾಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ. ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆಲ್ಕಿಟ್ ಯೋಜನೆ. ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ. ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ. ಸಾಧನ ಸಲಕರಣೆಗಳ ಯೋಜನೆ. ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: • ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ವಿಕಲಚೇತನ ಅಭ್ಯರ್ಥಿಗಳು ಮಾತ್ರ ಈ ಮೇಲಿನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
• ಫಲಾಪೇಕ್ಷಿಗಳು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ವಿಕಲಚೇತನರ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು: ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ) ವಿಕಲಚೇತನರ ಪ್ರಮಾಣ ಪತ್ರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ವೃತ್ತಿ ಪ್ರಮಾಣ ಪತ್ರ ವಿದ್ಯಾರ್ಥಿಗಳಾಗಿದ್ದಲ್ಲಿ ಶೈಕ್ಷಣಿಕ ಪ್ರಮಾಣ ಪತ್ರಗಳು ಇತರೆ ಅಗತ್ಯ ದಾಖಲಾತಿಗಳು ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ವಿಕಲಚೇತನ ಫಲಾನುಭವಿಗಳು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
• ಸೇವಾ ಸಿಂಧು ಅಧಿಕೃತ ಪೋರ್ಟಲ್ https://sevasindhu.karnataka.gov.in/Sevasindhu/Kannada?ReturnUrl=%2F ಮೂಲಕ ಲಾಗಿನ್ ಆಗಿ.
ನೀವು ಅರ್ಜಿ ಸಲ್ಲಿಸಬಯಸುವ ಯೋಜನೆಯನ್ನು ಆಯ್ಕೆ ಮಾಡಿ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
ಫಲಾಪೇಕ್ಷಿಗಳ ಗಮನಕ್ಕೆ ವಿಕಲಚೇತನ ಅಭ್ಯರ್ಥಿಗಳು ತಪ್ಪದೆ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಭವಿಷ್ಯದ ಬಳಕೆಗಾಗಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ : ನಿಮ್ಮ ಹತ್ತಿರದ ಜಿಲ್ಲಾ /ತಾಲೂಕು ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
Important Direct Links: