ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕ್ರೀಡಾಪಟು ಮಾರ್ಗದರ್ಶಕರ ನೇಮಕ, ಅರ್ಜಿ ಆಹ್ವಾನ

ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ

Published on:

ಫಾಲೋ ಮಾಡಿ
DYES Karnataka Notification 2025
DYES Karnataka Notification 2025

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಜಿಲ್ಲೆಗಳ ತರಬೇತಿ ಕೇಂದ್ರ ಹಾಗೂ ಕ್ರೀಡಾ ಶಾಲೆ ವಸತಿ ನಿಲಯಗಳಲ್ಲಿ ಕ್ರೀಡಾಪಟು ಮಾರ್ಗದರ್ಶಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಲು ಮತ್ತು ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿರ್ವಹಣೆ ಸಂಬಂಧ ಮಾರ್ಗದರ್ಶನ ನೀಡುವ ಸಲುವಾಗಿ ಬೆಂಗಳೂರು ನಗರ, ಬೆಳಗಾವಿ, ಕಲ್ಬುರ್ಗಿ, ಮೈಸೂರು, ಕೂಡಿಗೆ ಕ್ರೀಡಾ ಶಾಲೆ-ವಸತಿ ನಿಲಯ ಹಾಗೂ ವಿದ್ಯಾನಗರ ತರಬೇತಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಒಟ್ಟು 6 ಕ್ರೀಡಾಪಟು ಮಾರ್ಗದರ್ಶಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅ.12ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.