ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕ್ರೀಡಾಪಟು ಮಾರ್ಗದರ್ಶಕರ ನೇಮಕ, ಅರ್ಜಿ ಆಹ್ವಾನ

ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ

Published on:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಜಿಲ್ಲೆಗಳ ತರಬೇತಿ ಕೇಂದ್ರ ಹಾಗೂ ಕ್ರೀಡಾ ಶಾಲೆ ವಸತಿ ನಿಲಯಗಳಲ್ಲಿ ಕ್ರೀಡಾಪಟು ಮಾರ್ಗದರ್ಶಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಲು ಮತ್ತು ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿರ್ವಹಣೆ ಸಂಬಂಧ ಮಾರ್ಗದರ್ಶನ ನೀಡುವ ಸಲುವಾಗಿ ಬೆಂಗಳೂರು ನಗರ, ಬೆಳಗಾವಿ, ಕಲ್ಬುರ್ಗಿ, ಮೈಸೂರು, ಕೂಡಿಗೆ ಕ್ರೀಡಾ ಶಾಲೆ-ವಸತಿ ನಿಲಯ ಹಾಗೂ ವಿದ್ಯಾನಗರ ತರಬೇತಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಒಟ್ಟು 6 ಕ್ರೀಡಾಪಟು ಮಾರ್ಗದರ್ಶಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅ.12ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ನೇಮಕಾತಿ ಪ್ರಕಟಣೆಯ ದಿನಾಂಕ – ಸೆಪ್ಟೆಂಬರ್ 18, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 12, 2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಅಥವಾ ಕಾಮನ್ ವೆಲ್ತ್ ಮತ್ತು ಏಷಿಯನ್ ಗೇಮ್ಸ್ ಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ – 58 ವರ್ಷಗಳು

ಸಂಬಳ:

ಆಯ್ಕೆಯಾದ ತರಬೇತುದಾರ ಅಭ್ಯರ್ಥಿಗಳಿಗೆ ಮಾಸಿಕ 39,960ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

• ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕೃತ ವೆಬೈಟ್ https://dyes.karnataka.gov.in/ ಗೆ ಭೇಟಿ ನೀಡಿ.

• ಇತ್ತೀಚಿನ ಸುದ್ದಿಗಳು ವಿಭಾಗದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತುದಾರರ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆ ಮುದ್ರಣ ತೆಗೆದುಕೊಳ್ಳಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ. ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಕ್ಟೋಬರ್ 12ರೊಳಗೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು.

ವಿಳಾಸ: ✓ ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001

Important Direct Links:

Official Notification PDFDownload
Official Websitedyes.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕ್ರೀಡಾಪಟು ಮಾರ್ಗದರ್ಶಕರ ನೇಮಕ, ಅರ್ಜಿ ಆಹ್ವಾನ”

Leave a Comment