ಭಾರತ ಸರ್ಕಾರದ ಸಾರ್ವಜನಿಕ ಉದ್ಯಮವಾಗಿರುವ ರಫ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ (ECGC) ಲಿಮಿಟೆಡ್ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಜನರಲಿಸ್ಟ್ ಮತ್ತು ಸ್ಪೆಷಲಿಸ್ಟ್ ಕೇಡರ್ನಲ್ಲಿ ಖಾಲಿ ಇರುವ ಒಟ್ಟು 30 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.02ರೊಳಗೆ ECGC ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://main.ecgc.in/english/ಮೂಲಕ ಅರ್ಜಿ ಸಲ್ಲಿಸಬಹುದು.
✓ ಪ್ರೊಬೇಷನರಿ ಆಫೀಸರ್ (ಜನರಲಿಸ್ಟ್ಗಳು) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ/ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
✓ ಪ್ರೊಬೇಷನರಿ ಆಫೀಸರ್ (ತಜ್ಞರು) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಟ್ಟದಲ್ಲಿ ಹಿಂದಿಯನ್ನು ಕೋರ್/ಐಚ್ಛಿಕ/ಪ್ರಮುಖ ವಿಷಯವಾಗಿಟ್ಟುಕೊಂಡು ಇಂಗ್ಲಿಷ್ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಮಟ್ಟದಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ಕೋರ್/ಇಲೆಕ್ಟಿವ್/ಪ್ರಮುಖ ವಿಷಯಗಳಾಗಿ ಹೊಂದಿರುವ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಇಂಗ್ಲಿಷ್ ಮತ್ತು ಹಿಂದಿ/ಹಿಂದಿ ಅನುವಾದದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
01-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಅಭ್ಯರ್ಥಿಯು 02-11-1995 ಕ್ಕಿಂತ ಮೊದಲು ಮತ್ತು 01-11-2004 ಕ್ಕಿಂತ ನಂತರ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿರಬೇಕು.
ವಯೋಮಿತಿ ಸಿಡಿಲಿಕೆ: ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10-15 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ
ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 88,635-1,69,025ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 850ರೂ. ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 175ರೂ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
• ECGC ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://main.ecgc.in/english/ ಗೆ ಭೇಟಿ ನೀಡಿ.
• ನಂತರ ಮುಖಪುಟದಲ್ಲಿರುವ “Announcements”ನಡಿಯಲ್ಲಿ ನೀಡಲಾದ “Click here for Registration of application for Probationary officers. The link will become live on 11.11.2025 and remains live till 02.12.2025” ಲಿಂಕ್ ಮೇಲೆ ಕ್ಲಿಕ್ ಮಾಡಿ.
Ecgc Probationary Officers (Generalist And Specialist) Online Application 2025
• ಅಭ್ಯರ್ಥಿಗಳು ಆನ್ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ಮೂಲ ಮಾಹಿತಿಯನ್ನು ನಮೂದಿಸುವ ಮೂಲಕ ತಮ್ಮ ಅರ್ಜಿಯನ್ನು ನೋಂದಾಯಿಸಲು “ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ” ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ವೈಯಕ್ತಿಕ ಮಾಹಿತಿಗಳು, ಸಹಿ, ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.