ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(ECIL)ನಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಪದವೀಧರ ಎಂಜಿನಿಯರ್ ಅಪ್ರೆಂಟಿಸ್ (ಜಿಇಎ)/ತಂತ್ರಜ್ಞ (ಡಿಪ್ಲೊಮಾ)ಅಪ್ರೆಂಟಿಸ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಹೈದ್ರಬಾದ್‌ನಲ್ಲಿ, ವಿವಿಧ ಶಾಖೆಗಳಿಗೆ 200 ಪದವೀಧರ ಹಾಗೂ 48 ಡಿಪ್ಲೋಮಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು 1 ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ECIL ಅಧಿಕೃತ ಜಾಲತಾಣ https://www.ecil.co.in/job_details_01_2026.phpಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ – ಜನವರಿ 23, 2026
ದಾಖಲೆಗಳ ಪರಿಶೀಲನೆಯ ದಿನಾಂಕ – ಜನವರಿ 28, 2026
ಶೈಕ್ಷಣಿಕ ಅರ್ಹತೆ:
✓ ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ(ECE/CSE/IT/MECHANICAL/EEE/EIE/CIVIL/CHEMICAL) ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
✓ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ECE/CSE/IT/MECHANICAL/EEE/EIE/CIVIL/CHEMICAL) ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು.