ECILನಲ್ಲಿ ಅಪ್ರೆಂಟಿಸ್‌ಶಿಪ್‌

248 ಸ್ಥಾನಗಳು | ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ

Published on:

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(ECIL)ನಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಪದವೀಧರ ಎಂಜಿನಿಯರ್ ಅಪ್ರೆಂಟಿಸ್ (ಜಿಇಎ)/ತಂತ್ರಜ್ಞ (ಡಿಪ್ಲೊಮಾ)ಅಪ್ರೆಂಟಿಸ್‌ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಹೈದ್ರಬಾದ್‌ನಲ್ಲಿ, ವಿವಿಧ ಶಾಖೆಗಳಿಗೆ 200 ಪದವೀಧರ ಹಾಗೂ 48 ಡಿಪ್ಲೋಮಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು 1 ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ECIL ಅಧಿಕೃತ ಜಾಲತಾಣ https://www.ecil.co.in/job_details_01_2026.phpಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 06, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 20, 2026
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ – ಜನವರಿ 23, 2026
  • ದಾಖಲೆಗಳ ಪರಿಶೀಲನೆಯ ದಿನಾಂಕ – ಜನವರಿ 28, 2026

ಶೈಕ್ಷಣಿಕ ಅರ್ಹತೆ:

✓ ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ(ECE/CSE/IT/MECHANICAL/EEE/EIE/CIVIL/CHEMICAL) ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

✓ ಡಿಪ್ಲೋಮಾ ಅಪ್ರೆಂಟಿಸ್‌ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ECE/CSE/IT/MECHANICAL/EEE/EIE/CIVIL/CHEMICAL) ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್‌ ಪೂರ್ಣಗೊಳಿಸಿರಬೇಕು.

ವಯೋಮಿತಿ:

31-12-2025 ರಂತೆ;

ಗರಿಷ್ಠ ವಯೋಮಿತಿ – 25 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.

ಸ್ಟೈಫಂಡ್:

ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ ಹುದ್ದೆಗಳಿಗೆ 9,000ರೂ. ಹಾಗೂ ಡಿಪ್ಲೋಮಾ ಅಪ್ರೆಂಟಿಸ್‌ ಹುದ್ದೆಗಳಿಗೆ 8,000ರೂ. ವರೆಗೆ ಮಾಹೆಯಾನ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ
  • ದಾಖಲೆ ಪರಿಶೀಲನೆ
  • ಅಂತಿಮ ಆಯ್ಕೆ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು ECIL ಅಧಿಕೃತ ಜಾಲತಾಣ https://www.ecil.co.in/job_details_01_2026.phpಕ್ಕೆ ಭೇಟಿ ನೀಡಿ.

• ಬಳಿಕ “GEA/TA ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.” ಲಿಂಕ್ ಮೇಲೆ ಟ್ಯಾಪ್ ಮಾಡಿ.

• ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಸಹಿ ಭಾವಚಿತ್ರ ಶೈಕ್ಷಣಿಕ ಮಾಹಿತಿ ನಮೂದಿಸಿ. ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitehttps://www.ecil.co.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment