ಪರಮಾಣು ಇಂಧನ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಆರಂಭಿಸಿದೆ.
ವಿವಿಧ ವಿಭಾಗಗಳಲ್ಲಿ ಟೆಕ್ನಿಷಿಯನ್(13), ಸೂಪರ್ವೈಸರ್(05), ಡ್ರಾಫ್ಟ್ಸಮನ್ ಸೂಪರ್ವೈಸರ್(02) ಹಾಗೂ ಪ್ರಾಜೆಕ್ಟ್ ಎಂಜಿನಿಯರ್(04) ಸೇರಿ ಒಟ್ಟು 24 ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ECIL ಅಧಿಕೃತ ಜಾಲತಾಣ https://www.ecil.co.in/jobs.html ಕ್ಕೆ ಭೇಟಿ ನೀಡಿ, ಜ.20ರೊಳಗೆ ಅರ್ಜಿ ಸಲ್ಲಿಸಬಹುದು.
✓ ಟೆಕ್ನಿಷಿಯನ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
✓ ಸೂಪರ್ವೈಸರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
✓ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಿಎಸ್ಇ/ಐಟಿ/ಇಸಿಇ/ಇಇಇ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
**ಜೊತೆಗೆ ನಿಗದಿತ ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
31-12-2025 ರಂತೆ;
• ಟೆಕ್ನಿಷಿಯನ್ ಹಾಗೂ ಸೂಪರ್ವೈಸರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು • ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು