ಪರಮಾಣು ಇಂಧನ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಆರಂಭಿಸಿದೆ.
ವಿವಿಧ ವಿಭಾಗಗಳಲ್ಲಿ ಟೆಕ್ನಿಷಿಯನ್(13), ಸೂಪರ್ವೈಸರ್(05), ಡ್ರಾಫ್ಟ್ಸಮನ್ ಸೂಪರ್ವೈಸರ್(02) ಹಾಗೂ ಪ್ರಾಜೆಕ್ಟ್ ಎಂಜಿನಿಯರ್(04) ಸೇರಿ ಒಟ್ಟು 24 ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ECIL ಅಧಿಕೃತ ಜಾಲತಾಣ https://www.ecil.co.in/jobs.html ಕ್ಕೆ ಭೇಟಿ ನೀಡಿ, ಜ.20ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 06, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 20, 2026
ಶೈಕ್ಷಣಿಕ ಅರ್ಹತೆ:
✓ ಟೆಕ್ನಿಷಿಯನ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
✓ ಸೂಪರ್ವೈಸರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
✓ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಿಎಸ್‌ಇ/ಐಟಿ/ಇಸಿಇ/ಇಇಇ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
**ಜೊತೆಗೆ ನಿಗದಿತ ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
31-12-2025 ರಂತೆ;
• ಟೆಕ್ನಿಷಿಯನ್ ಹಾಗೂ ಸೂಪರ್ವೈಸರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
• ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಸಂಬಳ:
ಟೆಕ್ನಿಷಿಯನ್ ಹುದ್ದೆಗಳಿಗೆ – 30,000ರೂ.
ಸೂಪರ್ವೈಸರ್ ಹುದ್ದೆಗಳಿಗೆ – 35,000ರೂ.
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ – 40,000ರೂ.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ಟ್ರೇಡ್/ಕೌಶಲ್ಯ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು ECIL ಅಧಿಕೃತ ಜಾಲತಾಣ https://www.ecil.co.in/jobs.htmlಕ್ಕೆ ಭೇಟಿ ನೀಡಿ.
• ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಮೇಲೆ ಟ್ಯಾಪ್ ಮಾಡಿ.
• ತಾತ್ಕಾಲಿಕ ಐಡಿ ಹಾಗೂ ಹುಟ್ಟಿದ ದಿನಾಂಕ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official (Technician, Supervisor) Notification PDF | Download |
| Official (Project Engineer) Notification PDF | Download |
| Online Application Form Link | Apply Now |
| Official Website | https://www.ecil.co.in/ |
| More Updates | KarnatakaHelp.in |
ಜ್ವರ ಬಂಧ ಕಾರಣ