2025ನೇ ಸಾಲಿನ ಏಕಲವ್ಯ ಮಾದರಿ ವಸತಿ ಶಾಲೆಗಳ ಸಿಬ್ಬಂದಿ ಆಯ್ಕೆ ಪರೀಕ್ಷೆ (ESSE)ಯ ಹಾಸ್ಟೆಲ್ ವಾರ್ಡನ್, ಮಹಿಳಾ ಸ್ಟಾಫ್ ನರ್ಸ್, ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್ ಹಾಗೂ ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಸಂಬಂಧಿಸಿದಂತೆ ಡಿ.21ರಂದು ನಡೆಯಲಿರುವ ಶ್ರೇಣಿ-I ಪರೀಕ್ಷೆಯ ಪ್ರವೇಶ ಪತ್ರವನ್ನು ಬುಡಕಟ್ಟು ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ಸಂಘ ಶುಕ್ರವಾರ(ಡಿ.19) ಬಿಡುಗಡೆಗೊಳಿಸಿದೆ.
ಡಿ.21ಕ್ಕೆ ಬೆಳಿಗ್ಗೆ 9 ರಿಂದ 11ರವರೆಗೆ ಹಾಸ್ಟೆಲ್ ವಾರ್ಡನ್ ಮತ್ತು ಮಹಿಳಾ ಸ್ಟಾಫ್ ನರ್ಸ್ ಹುದ್ದೆಗಳಿಗೆ ಪರೀಕ್ಷೆ ಹಾಗೂ ಮಧ್ಯಾಹ್ನ 2.30 ರಿಂದ 4.30ರವರೆಗೆ ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್ ಮತ್ತು ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಪರೀಕ್ಷೆ ನಡೆಸಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಲಿಂಕ್ https://examinationservices.nic.in/AdmitCardService/Admitcard/Login?apprefno=102992511ಗೆ ಭೇಟಿ ತಮ್ಮ ನೋಂದಣಿ ಸಂಖ್ಯೆ, ಪಾಸ್ವರ್ಡ್ ಬಳಸಿ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು.




Yes
Good opinion
Yes