ಏಕಲವ್ಯ ವಸತಿ ಶಾಲೆಯಲ್ಲಿ ಶಿಕ್ಷಕರು, ಸ್ಟಾಫ್‌ ನರ್ಸ್‌, ವಾರ್ಡನ್, ಲ್ಯಾಬ್ ಅಟೆಂಡೆಂಟ್ ಹುದ್ದೆಗಳ ಬೃಹತ್‌ ಭರ್ತಿ

ಒಟ್ಟು 7267 ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ | ಅರ್ಜಿ ಸಲ್ಲಿಸಲು ಅ.23 ಕೊನೆ ದಿನ

Published on:

ಫಾಲೋ ಮಾಡಿ
EMRS Staff Selection Exam (ESSE) 2025 Notification
EMRS Staff Selection Exam (ESSE) 2025

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ 2025ರ EMRS ಸಿಬ್ಬಂದಿ ಆಯ್ಕೆ ಪರೀಕ್ಷೆ(ಇಎಂಆರ್‌ಎಸ್‌)ಗೆ ಅರ್ಜಿ ಆಹ್ವಾನಿಸಲಾಗಿದೆ.

ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಘವು (NESTS) ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿನ ವಿವಿಧ ವೃಂದಗಳಲ್ಲಿ ಖಾಲಿ ಇರುವ (ಪ್ರಾಂಶುಪಾಲರು, ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಮಹಿಳಾ ಸ್ಟಾಫ್ ನರ್ಸ್, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) ಮತ್ತು ಲ್ಯಾಬ್ ಅಟೆಂಡೆಂಟ್) ಸೇರಿದಂತೆ ಒಟ್ಟು 7267 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಜಿದಾರರು NESTS ಅಧಿಕೃತ ಜಾಲತಾಣ https://nests.tribal.gov.in/ಕ್ಕೆ ಭೇಟಿ ನೀಡಿ. ಅ.23ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಏಕಲವ್ಯ ವಸತಿ ಶಾಲೆಯಲ್ಲಿ ಶಿಕ್ಷಕರು, ಸ್ಟಾಫ್‌ ನರ್ಸ್‌, ವಾರ್ಡನ್, ಲ್ಯಾಬ್ ಅಟೆಂಡೆಂಟ್ ಹುದ್ದೆಗಳ ಬೃಹತ್‌ ಭರ್ತಿ”

Leave a Comment