ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಪತ್ನಿಯರಿಗೆ ವಿಧವಾ ವೇತನ ಯೋಜನೆಯನ್ನು ಜಾರಿ ಮಾಡಿದ್ದು, ಯೋಜನೆಯಲ್ಲಿ ರೈತನ ಪತ್ನಿಗೆ ವಿಧವಾ ವೇತನ (Farmer Widow Pension) ಪ್ರತಿ ತಿಂಗಳು ನೀಡಲಾಗುತ್ತಿದೆ.
ರಾಜ್ಯದಲ್ಲಿ ಇರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಪತ್ನಿಯರಿಗೆ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದೆ.
ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿ ಗುರುತಿಸಿ, ಪರಿಹಾರ ಪಡೆದಿರುವ ಮೃತ ರೈತರ ಪತ್ನಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದೆ. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಪಿಂಚಣಿ ಮೊತ್ತದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಯೋಜನೆಯ ಅರ್ಹತಾ ಮಾನದಂಡ;
ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿ ಗುರುತಿಸಿ ಪರಿಹಾರಧನ ಪಡೆದಿರಬೇಕು.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಕೃಷಿ ಇಲಾಖೆಯಲ್ಲಿ ಪರಿಹಾರ ಪಡೆದಿರುವ ಬಗ್ಗೆ ಆದೇಶದ ಪ್ರತಿ.
ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ ನಿಗಧಿತ ನಮೂನೆ ಭರ್ತಿ ಮಾಡಿ, ಅರ್ಜಿ ಸಲ್ಲಿಸಬೇಕು.
ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು
ಆಧಾರ್ ಕಾರ್ಡ್
ಪಿಂಚಣಿ ಮೊತ್ತ:
ರೈತ ಪತ್ನಿಯರಿಗೆ ವಿಧವಾ ವೇತನ ಯೋಜನೆಯಲ್ಲಿ ಪ್ರತಿ ತಿಂಗಳು ಫಲಾನುಭವಿಯ ಖಾತೆಗೆ 2000 ರೂಗಳನ್ನು ಜಮಾ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ರೈತ ಪತ್ನಿಯರಿಗೆ ವಿಧವಾ ವೇತನ ಯೋಜನೆಗೆ ಫಲಾನುಭವಿಗಳು ಆಫ್ ಲೈನ್ ಮೂಲಕ ವಾಸಸ್ಥಳ ವ್ಯಾಪ್ತಿಯ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.