ಖಾಸಗಿ ವಲಯದ ಪ್ರಮುಖ ಬ್ಯಾಂಕಾಗಿರುವ ಫೆಡರಲ್ ಬ್ಯಾಂಕ್(Federal Bank)ನಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬ್ಯಾಂಕಿನ ಅಧಿಸೂಚಿತ ಶಾಖೆಗಳು/ಕಚೇರಿಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಜ.08ರೊಳಗೆ ಫೆಡರಲ್ ಬ್ಯಾಂಕ್ ಅಧಿಕೃತ ಜಾಲತಾಣ https://federalbankcareers.zappyhire.com/apply ಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 30, 2025
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 08, 2026
ಕೇಂದ್ರ ಆಧಾರಿತ ಆನ್ಲೈನ್ ಆಪ್ಟಿಟ್ಯೂಡ್ ಪರೀಕ್ಷಾ ದಿನಾಂಕ – ಫೆಬ್ರವರಿ 01, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಆದರೆ ಪದವಿಯಲ್ಲಿ ಉತ್ತೀರ್ಣರಾಗಿರಬಾರದು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
(ಅಭ್ಯರ್ಥಿಗಳು 01-12-2005 ಮತ್ತು 01-12-2007 (ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು.
ವಯಸ್ಸಿನ ಸಡಿಲಿಕೆ; ಫೆಡರಲ್ ಬ್ಯಾಂಕಿನ ಯಾವುದೇ ಶಾಖೆ/ ಕಚೇರಿಯಲ್ಲಿ ತಾತ್ಕಾಲಿಕ ಕಚೇರಿ ಸಹಾಯಕ/ಬ್ಯಾಂಕ್ಮ್ಯಾನ್, ಚಾಲಕ ಅಥವಾ ಕೇರ್ಟೇಕರ್ ಆಗಿ ಈ ಹಿಂದೆ ಸೇವೆ ಸಲ್ಲಿಸಿದ/ಸೇವೆ ಸಲ್ಲಿಸುತ್ತಿರುವ ಮತ್ತು ದಿನಾಂಕ 01-12-2025 ರಂದು ಅಥವಾ ಅದಕ್ಕೂ ಮೊದಲು ಬ್ಯಾಂಕಿನಿಂದ ಎಂಪನೇಲ್ ಮಾಡಲ್ಪಟ್ಟ ಅಭ್ಯರ್ಥಿಗಳಿಗೆ – 05 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಆಪ್ಟಿಟ್ಯೂಡ್ ಪರೀಕ್ಷೆ ವೈಯಕ್ತಿಕ ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,500-37,815ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೂ – 500ರೂ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ -100ರೂ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
• ಮೊದಲಿಗೆ ಅಭ್ಯರ್ಥಿಗಳು ಫೆಡರಲ್ ಬ್ಯಾಂಕ್ ಅಧಿಕೃತ ಜಾಲತಾಣ https://federalbankcareers.zappyhire.com/applyಕ್ಕೆ ಭೇಟಿ ನೀಡಿ.
• ನಂತರ ಕಚೇರಿ ಸಹಾಯಕರು ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.