ಫೆಡರಲ್ ಬ್ಯಾಂಕಿನಲ್ಲಿ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗಾವಕಾಶ

ಎಸ್ಸೆಸ್ಸೆಲ್ಸಿ ಪಾಸ್‌ ಆದವರಿಗೆ ಆದ್ಯತೆ | ಅರ್ಜಿ ಸಲ್ಲಿಕೆಗೆ ಜ.08ರ ಗಡುವು

Published on:

ಖಾಸಗಿ ವಲಯದ ಪ್ರಮುಖ ಬ್ಯಾಂಕಾಗಿರುವ ಫೆಡರಲ್ ಬ್ಯಾಂಕ್(Federal Bank)ನಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬ್ಯಾಂಕಿನ ಅಧಿಸೂಚಿತ ಶಾಖೆಗಳು/ಕಚೇರಿಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಜ.08ರೊಳಗೆ ಫೆಡರಲ್ ಬ್ಯಾಂಕ್ ಅಧಿಕೃತ ಜಾಲತಾಣ https://federalbankcareers.zappyhire.com/apply ಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 30, 2025
  • ನೇಮಕಾತಿಗೆ ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜನವರಿ 08, 2026
  • ಕೇಂದ್ರ ಆಧಾರಿತ ಆನ್‌ಲೈನ್ ಆಪ್ಟಿಟ್ಯೂಡ್ ಪರೀಕ್ಷಾ ದಿನಾಂಕ – ಫೆಬ್ರವರಿ 01, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಆದರೆ ಪದವಿಯಲ್ಲಿ ಉತ್ತೀರ್ಣರಾಗಿರಬಾರದು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 20 ವರ್ಷಗಳು

(ಅಭ್ಯರ್ಥಿಗಳು 01-12-2005 ಮತ್ತು 01-12-2007 (ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು.

ವಯಸ್ಸಿನ ಸಡಿಲಿಕೆ; ಫೆಡರಲ್ ಬ್ಯಾಂಕಿನ ಯಾವುದೇ ಶಾಖೆ/ ಕಚೇರಿಯಲ್ಲಿ ತಾತ್ಕಾಲಿಕ ಕಚೇರಿ ಸಹಾಯಕ/ಬ್ಯಾಂಕ್‌ಮ್ಯಾನ್, ಚಾಲಕ ಅಥವಾ ಕೇರ್‌ಟೇಕರ್ ಆಗಿ ಈ ಹಿಂದೆ ಸೇವೆ ಸಲ್ಲಿಸಿದ/ಸೇವೆ ಸಲ್ಲಿಸುತ್ತಿರುವ ಮತ್ತು ದಿನಾಂಕ 01-12-2025 ರಂದು ಅಥವಾ ಅದಕ್ಕೂ ಮೊದಲು ಬ್ಯಾಂಕಿನಿಂದ ಎಂಪನೇಲ್ ಮಾಡಲ್ಪಟ್ಟ ಅಭ್ಯರ್ಥಿಗಳಿಗೆ – 05 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು.

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಆಪ್ಟಿಟ್ಯೂಡ್ ಪರೀಕ್ಷೆ
ವೈಯಕ್ತಿಕ ಸಂದರ್ಶನ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,500-37,815ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೂ – 500ರೂ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ -100ರೂ.

ಅರ್ಜಿ‌ ಸಲ್ಲಿಸುವ ವಿಧಾನ ಹೇಗೆ?

• ಮೊದಲಿಗೆ ಅಭ್ಯರ್ಥಿಗಳು ಫೆಡರಲ್ ಬ್ಯಾಂಕ್ ಅಧಿಕೃತ ಜಾಲತಾಣ https://federalbankcareers.zappyhire.com/applyಕ್ಕೆ ಭೇಟಿ ನೀಡಿ.

• ನಂತರ ಕಚೇರಿ ಸಹಾಯಕರು ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ನೋಂದಾಯಿಸಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.

• ಕೊನೆದಾಗಿ ಅರ್ಜಿಯನ್ನು ಪರೀಶೀಲನೆ‌ ಮಾಡಿ‌ ಅರ್ಜಿಯನ್ನು ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.federal.bank.in
More UpdatesKarnatakaHelp.in

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಫೆಡರಲ್ ಬ್ಯಾಂಕಿನಲ್ಲಿ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗಾವಕಾಶ”

Leave a Comment