ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗಾಗಿ ನ.07ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.00 ಗಂಟೆವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10ನೇ ತರಗತಿ, ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷ ವಯೋಮಿತಿಯ ಅಭ್ಯರ್ಥಿಗಳು, ‘ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ’ ಈ ವಿಳಾಸದಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 7975294271ಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.