ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ತಂದೆ ಇಲ್ಲದ ಮಕ್ಕಳ ಖಾತೆಗೆ ವಾರ್ಷಿಕವಾಗಿ ಸ್ಕಾಲರ್‌ಶಿಪ್ ನೀಡುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಗೆ ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಯೋಜನೆಯ ಮೂಲಕ ವರ್ಷಕ್ಕೆ 24000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯ ನೀಡಲಾಗುತ್ತದೆ.ತಂದೆ ಇಲ್ಲದ ಮಗು ಇದ್ದಲ್ಲಿ ಅವರು ಪ್ರಾಯೋಜಕತ್ವ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಫಾರಂ ಅನ್ನು ಖುದ್ದಾಗಿ ಡಿಸಿ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳನ್ನು ಸೇರಿಸಿ ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ದೃಡೀಕರಣ ಮಾಡಿ ನಂತರ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನೆಗೆ ಜಿಲ್ಲಾಧಿಕಾರಿಗಳ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಯೋಜನೆಯು ಪ್ರಾರಂಭವಾಗುತ್ತದೆ.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
ಆಧಾರ್ ಕಾರ್ಡ್
ಆದಾಯ ಮತ್ತು ಜಾತಿ ಪ್ರಮಾಣ ಪತ್ರ
ತಂದೆಯ ಮರಣ ಪ್ರಮಾಣ ಪತ್ರ
ಶಾಲೆ ಅಥವಾ ಕಾಲೇಜಿನಿಂದ ದೃಢೀಕರಣ ಪ್ರಮಾಣ ಪತ್ರ
ಬ್ಯಾಂಕ್ ಖಾತೆ ಪುಸ್ತಕದ ಪ್ರತಿ
ಪಾಸ್ ಪೋರ್ಟ್ ಸೈಜ್ ಭಾವಚಿತ್ರ
How to Apply for Financial Assistance Scholarship 2024?
ಅರ್ಜಿ ಸಲ್ಲಿಸುವುದು ಹೇಗೆ…?: ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿಗದಿತ ಕಚೇರಿಗೆ ಸಲ್ಲಿಸಬೇಕು.
ಕಚೇರಿಯ ವಿಳಾಸ:
ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ ಒಂದನೇ ಮಹಡಿ ಜಿಲ್ಲಾಧಿಕಾರಿಗಳ ಕಛೇರಿ, ಮಂಗಳೂರು*
ದಕ್ಷಿಣ ಕನ್ನಡ ಜಿಲ್ಲಾ ಕಛೇರಿಯನ್ನು ಕಚೇರಿ ಕೆಲಸದ ಸಮಯದ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ : 0824-2440004 ಮತ್ತು +918495078320 ಇ-ಮೇಲ್ ವಿಳಾಸ – dcpu.mnglr@gmail.com ಕ್ಕೆ ಸಂಪರ್ಕಿಸಬಹುದು