ಕರ್ನಾಟಕ ಲಲಿತಕಲಾ ಅಕಾಡೆಮಿಯ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2024-25ನೇ ಸಾಲಿಗೆ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ವಿದ್ಯಾರ್ಥಿ ವೇತನವನ್ನು (One Time Scholarship) ನೀಡಲಾಗುತ್ತದೆ. ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ಬಿ.ಎಫ್.ಎ/ಎಂ.ಎಫ್.ಎ ಚಿತ್ರಕಲಾ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 546 ಅಳತೆಯ ಎರಡು ಚಿತ್ರಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ವಿದ್ಯಾರ್ಥಿ ವೇತನ ಪಡೆದಿಲ್ಲವೆಂದು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರ ದೃಢೀಕರಣದೊಂದಿಗೆ ನಿಗದಿತ ಕಛೇರಿಯ ವಿಳಾಸಕ್ಕೆ ಸೆಪ್ಟೆಂಬರ್ 30ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
Important Dates of Fine Arts Scholarship 2024 Karnataka
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು;
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 12, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 30, 2024
Eligibility Criteria for Karnataka Fine Arts Scholarship 2024-25
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಇರಬೇಕಾದ ವಿದ್ಯಾರ್ಹತೆ;
ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ಬಿ.ಎಫ್.ಎ/ಎಂ.ಎಫ್.ಎ ಚಿತ್ರಕಲಾ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಯೋಮಿತಿಯು 20 ರಿಂದ 25 ವರ್ಷ ಒಳಗಿರಬೇಕು.
How to Apply for Karnataka Fine Arts Scholarship 2024-25
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ…?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕಛೇರಿಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಸಬೇಕು.
ಕಛೇರಿಯ ವಿಳಾಸ:
ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ. ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002
ಹೆಚ್ಚಿನ ಮಾಹಿತಿಗಾಗಿ:
- ಇಮೇಲ್ ವಿಳಾಸ- kla.karnataka@gmail.com
- ದೂರವಾಣಿ- 080-22480297ಕ್ಕೆ ಸಂಪರ್ಕ ಮಾಡಬಹುದು.
Important Direct Links:
Karnataka Fine Arts Scholarship 2024 Application Form and Notice PDF | Download |
Official Website | lalitkala.karnataka.gov.in |
More Updates | Karnataka Help.in |
FAQs
What is the Last Date of Fine Arts Scholarship 2024-25 Karnataka?
September 30, 2024