ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರು ಅರ್ಜಿ ಸಲ್ಲಿಸಬುಹುದು. ಸದರಿ ತರಬೇತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಇಲಾಖೆಯ ಜಾಲತಾಣ https://twd.karnataka.gov.in/ದ ಮೂಲಕ ಅಥವಾ ನಿಮ್ಮ ಜಿಲ್ಲೆಯಲ್ಲಿನ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೋಂದಣಿ ಮಾಡಿಸಿರಬೇಕು.
ಸ್ಟೈಫಂಡ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಹೆಯಾನ ನಿಗದಿತ ದರದಲ್ಲಿ ಸ್ಟೈಫಂಡ್ ನೀಡಲಾಗುತ್ತದೆ.
ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಅಭ್ಯರ್ಥಿಗಳು ಮೊದಲಿಗೆ TWD ಅಧಿಕೃತ ಜಾಲತಾಣ https://twd.karnataka.gov.in/ ಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಥವಾ
ಅಭ್ಯರ್ಥಿಗಳು ಅರ್ಜಿಯನ್ನು ಆಯಾ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಪಡೆದು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.