ಕೃಷಿ ವಿದ್ಯಾರ್ಥಿಗಳಿಗೆ ಉಚಿತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನ

Published on:

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ ಕೃಷಿ ವಿಜ್ಞಾನ ವಿದ್ಯಾರ್ಥಿಗಳು, ಪದವೀಧರರು, ಮತ್ತು ಕೃಷಿ ವಿಜ್ಞಾನಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಉಚಿತವಾಗಿ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆ.31ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 31, 2025

ಶೈಕ್ಷಣಿಕ ಅರ್ಹತೆ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಕೃಷಿ ಪದವಿಯಲ್ಲಿ ಉತ್ತೀರ್ಣರಾದ ಅಥವಾ ಪ್ರಸ್ತುತ ಕೃಷಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಕನಿಷ್ಠ ಮಿತಿ – 18 ವರ್ಷಗಳು
  • ಗರಿಷ್ಠ ಮಿತಿ – 45 ವರ್ಷಗಳು

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:

• ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

• ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 8 ಲಕ್ಷರೂ.ಗಳ ಒಳಗಿರಬೇಕು.

ಡ್ರೋನ್ ತರಬೇತಿಯ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ವರೆಗೆ ಉಚಿತವಾಗಿ ವಸತಿಯುತ ಅಡ್ವಾನ್ಸ್ಡ್‌ ಡ್ರೋನ್ ತರಬೇತಿಯನ್ನು ನೀಡಲಾಗುವುದು.

ಆಯ್ಕೆ ವಿಧಾನ:

12ನೇ ತರಗತಿ ಅಥವಾ ಅದಕ್ಕೆ ಸಮನಾದ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಹಾಗೂ ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

How to Apply for FREE Advanced Agri Drone Pilot Training 2025

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

• ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಅಧಿಕೃತ https://swdservices.karnataka.gov.in/petccoaching/AgriDroneHome.aspx ಜಾಲತಾಣಕ್ಕೆ ಭೇಟಿ ನೀಡಿ.

• ನಂತರ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಆಧಾರ್ ಸಂಖ್ಯೆ ಹಾಗೂ ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಹಾಗೂ ಕ್ಯಾಪ್ಚವನ್ನು ನಮೂದಿಸಿ ಮುಂದುವರೆಯಿರಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಅರ್ಜಿ ಭರ್ತಿ ಮಾಡಿದ ನಂತರ ಮತ್ತೊಮ್ಮೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ: ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನೇಮಕಾತಿ ಸಂಬಂಧ ಹೊಸ ವಿಷಯಗಳನ್ನು ತಿಳಿಯಲು ತಪ್ಪದೆ ನಮ್ಮ ಪೇಜ್ ಅನ್ನು ಫಾಲೋ ಮಾಡಿ ಮತ್ತು ನಮ್ಮ ವಾಟ್ಸಪ್ ಚಾನೆಲ್ ಗೆ ಜಾಯಿನ್ ಆಗಿ.

Important Direct Links:

Advanced Agri Drone Pilot Training 2025 Application Form LinkApply Now
Official Websiteswdservices.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment