ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಜೊತೆಗೆ ಉಚಿತ ಊಟ-ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ತರಬೇತಿ ಅವಧಿ ಪೂರ್ಣಗೊಳಿಸುವವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.


