ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಜೊತೆಗೆ ಉಚಿತ ಊಟ-ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ತರಬೇತಿ ಅವಧಿ ಪೂರ್ಣಗೊಳಿಸುವವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳವರು ಮಾ.23 ಸೋಮವಾರ ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಮಾ.23ರೊಳಗೆ ಸಂಸ್ಥೆ ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9505894247ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.̧
ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.