ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಿಬಿಆರ್‌ಎಸ್ಇಟಿಐ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯೋಮಾನದ ಮಹಿಳೆಯರು ಅರ್ಹರಾಗಿರುತ್ತಾರೆ. ಉಚಿತ ತರಬೇತಿಯ ಜೊತೆಗೆ ಊಟ, ವಸತಿ ಸೌಕರ್ಯ ಲಭ್ಯವಿರುತ್ತದೆ. ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ತರಬೇತಿ ಅ.6ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಸೆ.30ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ..?
ಸಂದರ್ಶನಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಿ…
ಆಸಕ್ತಿಯುಳ್ಳ ಮಹಿಳೆಯರು ತಮ್ಮ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳನ್ನು ತೆಗೆದುಕೊಂಡು ಸೆ.30ರ ಮಂಗಳವಾರ ಬೆಳಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
Important Direct Links:
| Official Website | CBRSETI |
| More Updates | KarnatakaHelp.in |