ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆ(Ganga Kalyana Yojane 2025)ಯಡಿ ಬೋರ್ ವೆಲ್ ಬಾವಿಗಳು ಮತ್ತು ತೆರೆದ ಬಾವಿಗಳನ್ನು ಕೊರೆಯಲು ಸಹಾಯಧನ(Free Borewell Scheme)ವನ್ನು ನೀಡಲು ವಿವಿಧ ನಿಗಮಗಳ ಫಲಾನುಭವಿಗಳು ಸೌಲಭ್ಯವನ್ನು ಪಡೆಯಬಹುದಾಗಿದೆ.
ಈ ಯೋಜನೆಯ ಅಡಿಯಲ್ಲಿ, ಫಲಾನುಭವಿ ರೈತರು ಪಂಪ್ ಸೆಟ್‌ಗಳು ಮತ್ತು ಪರಿಕರಗಳ ಸ್ಥಾಪನೆ ಮತ್ತು ಬೋರ್‌ವೆಲ್‌ಗಳು ಅಥವಾ ತೆರೆದ ಬಾವಿಗಳನ್ನು ಕೊರೆಯುವ ಮೂಲಕ ತಮ್ಮ ಆಸ್ತಿಯಲ್ಲಿ ನೀರಾವರಿ ಮೂಲಸೌಕರ್ಯವನ್ನು ಪಡೆಯುತ್ತಾರೆ. ಈ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಬ್ಸಿಡಿ ಮೂಲಕ ಬೋರ್ವೆಲ್ ಹಾಗೂ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿಗಳನ್ನೂ ಪ್ರತಿ ವರ್ಷವು ಆಹ್ವಾನಿಸಲಾಗುತ್ತದೆ, ಆಸಕ್ತರು ತಮ್ಮ ವ್ಯಾಪ್ತಿಗೆ ಬರುವ ನಿಗಮಗಳ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೂಳವೆ ಬಾವಿಗೆ 75,000 ರೂ. ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುತ್ತದೆ.
ಉಳಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000 ರೂ. ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.ಜೊತೆಗೆ ಶೇ.4ರ ಬಡ್ಡಿದರದಲ್ಲಿ 50,000 ರೂ.ಗಳ ಸಾಲವನ್ನು ಮಂಜೂರು ಮಾಡಲಾಗುತ್ತದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
- ಆಯಾ ನಿಗಮಕ್ಕೆ ಸಂಬಂಧಪಟ್ಟ ವರ್ಗಕ್ಕೆ ಸೇರಿದ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಬಹುದು
- 1.20 ಎಕರೆಯಿಂದ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರು ಅರ್ಜಿ ಸಲ್ಲಿಸಬಹುದು.
- ಈ ಯೋಜನೆಯ ಅಭ್ಯರ್ಥಿಯು 18 ರಿಂದ 55 ವರ್ಷದೊಳಗಿನವರಾಗಿರಬೇಕು.
- ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
- ಎಲ್ಲಾ ಮೂಲಗಳಿಂದ ಕೌಟುಂಬಿಕ ಆದಾಯ 6 ಲಕ್ಷ ರೂ. ಮೀರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಇತ್ತೀಚಿನ ಆರ್‌ಟಿಸಿ ಪ್ರತಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಭೂ-ಕಂದಾಯ ಪಾವತಿಸಿದ ರಸೀದಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
How to Apply for Free Borewell Scheme Karnataka
ಅರ್ಜಿ ಸಲ್ಲಿಸುವ ವಿಧಾನ;
ಅರ್ಹ ಅರ್ಜಿದಾರರು ಆಯಾ ನಿಗಮದಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಕ್ತಾಯವಾಗುವ ಒಳಗಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.
ಮತ್ತಷ್ಟು ಮಾಹಿತಿಗಾಗಿ ನಿಮ್ಮ Karnataka Help.inಗೆ ಭೇಟಿ ನೀಡಿ