ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಅಂಬರೀಶ ಬಿ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.15 ರಿಂದ 13 ದಿನಗಳ ಕಾಲ ತರಬೇತಿ ಇರಲಿದ್ದು, ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯೋಮಾನದ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಪುರುಷರು ಅರ್ಜಿ ಸಲ್ಲಿಸಬಹುದು. ಉಚಿತ ತರಬೇತಿ ಜೊತೆಗೆ ಊಟ ಹಾಗೂ ವಸತಿ ಸೌಕರ್ಯಗಳು ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿ ಪಡೆಯುವವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ಸಿಗಲಿದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.


