ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿ

Published on:

Updated On:

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಅಂಬರೀಶ ಬಿ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.15 ರಿಂದ 13 ದಿನಗಳ ಕಾಲ ತರಬೇತಿ ಇರಲಿದ್ದು, ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯೋಮಾನದ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಪುರುಷರು ಅರ್ಜಿ ಸಲ್ಲಿಸಬಹುದು. ಉಚಿತ ತರಬೇತಿ ಜೊತೆಗೆ ಊಟ ಹಾಗೂ ವಸತಿ ಸೌಕರ್ಯಗಳು ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿ ಪಡೆಯುವವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ಸಿಗಲಿದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ತರಬೇತಿಯಲ್ಲಿ ಪಾಲ್ಗೊಳ್ಳುವುದು ಹೇಗೆ..?

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ವಿಳಾಸದ ದಾಖಲೆಗಳೊಂದಿಗೆ ಡಿ.04ರ ಗುರುವಾರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರದಲ್ಲಿ ನಡೆಯುವ ಸಂದರ್ಶನ ನೇರವಾಗಿ ಪಾಲ್ಗೊಳ್ಳಬಹುದು ಅಥವಾ ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ.04 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Important Direct Links:

Official WebsiteCBRSETI
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

2 thoughts on “ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿ”

Leave a Comment