ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆ.27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಓದಲು-ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವಯೋಮಾನದ ಪುರುಷರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಆ.20(ಗುರುವಾರ) ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಆ.20ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.
Tumbane avashyakate ide