ಪರಿಶಿಷ್ಟ ಪಂಗಡಗಳ ಮತ್ತು ಅಲೆಮಾರಿ ಸಮುದಾಯ, ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯದಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ ಉಚಿತ ಡೇಟಾ ಎಂಟ್ರಿ ಆಪರೇಟರ್ ಮತ್ತು ಸ್ವಯಂ ಉದ್ಯೋಗದ ಟೈಲರ್, ಸಹಾಯಕ ಸೌಂದರ್ಯ ಚಿಕಿತ್ಸಕ, ಬಹು ಕೌಶಲ್ಯ ತಂತ್ರಜ್ಞ (ಎಲೆಕ್ಟ್ರಾನಿಕ್ಸ್) ಈ ವಿಷಯಗಳಲ್ಲಿ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಮುದಾಯದಲ್ಲಿನ ನಿರುದ್ಯೋಗ ಯುವಕ ಯುವತಿಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 8ನೇ ತರಗತಿ ಹಾಗೂ 10ನೇ ತರಗತಿ ಪೂರ್ಣಗೊಳಿಸಿದ್ದರೆ ಸಾಕು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಲೇಖನದಲ್ಲಿ ತರಬೇತಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 6, 2024.
ತರಬೇತಿ ಪಡೆದುಕೊಳ್ಳಲು ವಿದ್ಯಾರ್ಹತೆ ಏನು ಇರಬೇಕು..?
8ನೇ ತರಗತಿ ಹಾಗೂ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಮಾಡಿರಬೇಕು.
ಡೇಟಾ ಎಂಟ್ರಿ ಆಪರೇಟರ್ ತರಬೇತಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಮಾಡಿರಬೇಕು.
ವಯೋಮಿತಿ:
ಈ ತರಬೇತಿಗೆ ಅರ್ಜಿ ಸಲ್ಲಿಸುವವರ ವಯಸ್ಸು 18 ವರ್ಷದಿಂದ 46 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ತರಬೇತಿಯ ಅವಧಿ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ತಿಂಗಳು ಕಾಲ ತರಬೇತಿಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು:
ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ರೇಷನ್ ಕಾರ್ಡ್
ವಿದ್ಯಾರ್ಹತೆ ಪ್ರಮಾಣ ಪತ್ರ.
How to Apply for Free Data Entry Operator Training 2024
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ (ಸುಬ್ಬಯ್ಯ ಸರ್ಕಲ್), ಬೆಂಗಳೂರು-560027 ಇಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಜುಲೈ 06ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ
ದೂರವಾಣಿ ಸಂಖ್ಯೆ : 080-22240449, 22240999 ಗೆ ಸಂರ್ಕಿಸಬಹುದು