WhatsApp Channel Join Now
Telegram Group Join Now

Free Data Entry Operator Training: ಉಚಿತ ಡೇಟಾ ಎಂಟ್ರಿ ಆಪರೇಟರ್ ಗಳ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024- 25 ನೇ ಸಾಲಿನ ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಕೌಶಲ್ಯ ತರಬೇತಿ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಮತ್ತು ಅಲೆಮಾರಿ ಸಮುದಾಯ, ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯದಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ ಉಚಿತ ಡೇಟಾ ಎಂಟ್ರಿ ಆಪರೇಟರ್ ಮತ್ತು ಸ್ವಯಂ ಉದ್ಯೋಗದ ಟೈಲರ್, ಸಹಾಯಕ ಸೌಂದರ್ಯ ಚಿಕಿತ್ಸಕ, ಬಹು ಕೌಶಲ್ಯ ತಂತ್ರಜ್ಞ (ಎಲೆಕ್ಟ್ರಾನಿಕ್ಸ್) ಈ ವಿಷಯಗಳಲ್ಲಿ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ.

Free Data Entry Operator Training 2024-25
Free Data Entry Operator Training 2024-25

Free Data Entry Operator Training 2024-25

ಈ ಸಮುದಾಯದಲ್ಲಿನ ನಿರುದ್ಯೋಗ ಯುವಕ ಯುವತಿಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 8ನೇ ತರಗತಿ ಹಾಗೂ 10ನೇ ತರಗತಿ ಪೂರ್ಣಗೊಳಿಸಿದ್ದರೆ ಸಾಕು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಲೇಖನದಲ್ಲಿ ತರಬೇತಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 6, 2024.

ತರಬೇತಿ ಪಡೆದುಕೊಳ್ಳಲು ವಿದ್ಯಾರ್ಹತೆ ಏನು ಇರಬೇಕು..?

  • 8ನೇ ತರಗತಿ ಹಾಗೂ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಮಾಡಿರಬೇಕು.
  • ಡೇಟಾ ಎಂಟ್ರಿ ಆಪರೇಟರ್ ತರಬೇತಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಮಾಡಿರಬೇಕು.

ವಯೋಮಿತಿ:

ಈ ತರಬೇತಿಗೆ ಅರ್ಜಿ ಸಲ್ಲಿಸುವವರ ವಯಸ್ಸು 18 ವರ್ಷದಿಂದ 46 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ತರಬೇತಿಯ ಅವಧಿ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ತಿಂಗಳು ಕಾಲ ತರಬೇತಿಯನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವಿದ್ಯಾರ್ಹತೆ ಪ್ರಮಾಣ ಪತ್ರ.

How to Apply for Free Data Entry Operator Training 2024

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ (ಸುಬ್ಬಯ್ಯ ಸರ್ಕಲ್), ಬೆಂಗಳೂರು-560027  ಇಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು  ಸೂಕ್ತ ದಾಖಲಾತಿಗಳೊಂದಿಗೆ ಜುಲೈ 06ರೊಳಗೆ  ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ

ದೂರವಾಣಿ ಸಂಖ್ಯೆ : 080-22240449, 22240999 ಗೆ ಸಂರ್ಕಿಸಬಹುದು

Important Direct Links

More UpdatesKarnatakaHelp.in

Leave a Comment