Free Drone Pilot Training 2024-25: ನಮಸ್ತೆ ಬಂಧುಗಳೇ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ಉಪಯೋಗಿಸುವ ಕುರಿತು ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2024 25 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು Logistics, Surveillance, Agriculture ಮತ್ತು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಕರ್ನಾಟಕ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ವಸತಿಯುತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
sw.kar.nic Free Drone Pilot Training 2024: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳು ಈ ತರಬೇತಿಯನ್ನು ಪಡೆದು ಕೈಗಾರಿಕೆಗಳಲ್ಲಿ, ಮೈನ್ಸ್, ಸ್ಟೀಲ್, ವಿದ್ಯುತ್, ವಿಡಿಯೋಗ್ರಾಫಿ ಹಾಗೂ ಇತರೆ ಕ್ಷೇತ್ರಗಳಲ್ಲಿ ಡ್ರೋನ್ ಆಪರೇಟರ್ ಆಗಿ ಕಾರ್ಯನಿರ್ವಹಿಸಲು ಉದ್ಯೋಗ ಪ್ರಾರಂಭಿಸಬಹುದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ https://swdservices.karnataka.gov.in/petccoaching/Dronehomekan.aspx ಭೇಟಿ ನೀಡಿ ಅರ್ಜಿಗಳನ್ನು ಜುಲೈ 31ರ ಒಳಗೆ ಸಲ್ಲಿಸಬಹುದು. ಈ ಉಚಿತ ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
ತರಬೇತಿ ಕಾರ್ಯಕ್ರಮದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 30, 2024
ವಯೋಮಿತಿ:
ಆಸಕ್ತಿ ಇರುವ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆ:
ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು
ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು
ದೈಹಿಕ ಅಂಗವಿಕಲ ಮೀಸಲಾತಿ ಅಡಿಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಪ್ರಾಧಿಕಾರದಿಂದ ನಿಗದಿಪಡಿಸಲಾದ ಪ್ರಮಾಣ ಪತ್ರ ಪಡೆದಿರಬೇಕು
ವಾರ್ಷಿಕ ಆದಾಯ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ ರೂ 8 ಲಕ್ಷ ಮೀರಿರಬಾರದು.
ಕೋಸ್ ಗಳ ವಿವರ:
ಧೂಮ್ ಉಪಕರಣವನ್ನು ಉಪಕರಣವನ್ನು Logistics, Surveillance, Agriculture ಕೈಗಾರಿಕೆಗಳಲ್ಲಿ, ಮೈನ್ಸ್, ಸ್ಟೀಲ್, ವಿದ್ಯುತ್, ವಿಡಿಯೋಗ್ರಾಫಿ ಹಾಗೂ ಇತರೆ ಕ್ಷೇತ್ರಗಳಲ್ಲಿ ಡ್ರೋನ್ ಆಪರೇಟರ್ ಆಗಿ ಕಾರ್ಯನಿರ್ವಹಿಸಲು 15 ದಿನಗಳ ತರಬೇತಿ ನೀಡಲಾಗುತ್ತದೆ.
ಆಯ್ಕೆ ವಿಧಾನ:
SSLC ಯಲ್ಲಿ ಉತ್ತೀರ್ಣರಾಗಿರಬೇಕು.
ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.