ಹೊಸಕೋಟೆ: ತಾಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಮಹಿಳೆಯರಿಗಾಗಿ ಮಾರ್ಚ್ ತಿಂಗಳ ಮೊದಲ ವಾರದಿಂದ 31 ದಿನಗಳ ಉಚಿತ ಎಂಬ್ರಾಯಡರಿ (ಆರಿ ವರ್ಕ್ ಮತ್ತು ಸ್ಯಾರಿ ಕುಚ್ಚು ಹಾಕುವುದು) ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲೌಸ್‌ಗಳಿಗೆ ಆರಿ ವರ್ಕ್ ಮಾಡುವುದು, ಸ್ಯಾರಿ ಕುಚ್ಚು ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಬಗ್ಗೆ ತರಬೇತಿ ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವಯೋಮಾನದ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತದೆ. ಬಿಪಿಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ,
ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದು ಹೇಗೆ..?
ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ವಿಳಾಸದ ದಾಖಲೆಗಳೊಂದಿಗೆ, ಫೆ.21ರಂದು ಶನಿವಾರ ಬೆಳಿಗ್ಗೆ 9.00 ಗಂಟೆಗೆ “ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ” ನಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಫೆ.21ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 6363139123, 9505894247ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
| Official Website | CBRSETI |
| More Updates | KarnatakaHelp.in |
Yes