ಕೇಂದ್ರ ಸರ್ಕಾರದ ಮಹತ್ವ ಯೋಜನೆಯದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ದೇಶದ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗುತ್ತಿದೆ. ಈ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ದೇಶದ ಬಡ ಕುಟುಂಬಗಳಿಗೆ ಉಚಿತ LPG ಸಂಪರ್ಕವನ್ನು ಒದಗಿಸುವ ಉದ್ದೇಶವಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರವು 2016 ಮೇ ತಿಂಗಳಿನಲ್ಲಿ ಜಾರಿಗೆ ತಂದಿದೆ. ಈಗಾಗಲೇ ಭಾರತದಲ್ಲಿ ಹಲವಾರು ಕುಟುಂಬಗಳು ಈ ಯೋಜನೆಯ ಮುಖಾಂತರ ತಮ್ಮ ಮನೆಗೆ LPG ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆದುಕೊಂಡಿದ್ದಾರೆ. ಇದರ ಮುಂದುವರೆದ ಭಾಗವಾಗಿ ಪ್ರಧಾನ ಮಂತ್ರಿ ಉಜ್ವಲ್ ಯೋಜನಾ 2.0 ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಮಹಿಳೆಯರಿಗೆ ಉಚಿತ ಸಿಲೆಂಡರ್ ಮತ್ತು ಒಲೆ ನೀಡಲಾಗುತ್ತಿದೆ.