ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ. 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – 02-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-06-2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಗಳು ಪಟ್ಟಣ ಪ್ರದೇಶದವರಿಗೆ 1,20,000 ರೂ. ಗಳ ಒಳಗಿರಬೇಕು.
- 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ವಿಶೇಷ ಸೂಚನೆ: