Free Holige Yantra 2025: ಈ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ, ಅರ್ಜಿ ಆಹ್ವಾನ

Published on:

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ. 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – 02-06-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-06-2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಗಳು ಪಟ್ಟಣ ಪ್ರದೇಶದವರಿಗೆ 1,20,000 ರೂ. ಗಳ ಒಳಗಿರಬೇಕು.
  • 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು

ವಿಶೇಷ ಸೂಚನೆ:

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ

Steps to Apply for Free Holige Yantra 2025

ಅರ್ಜಿ ಸಲ್ಲಿಸುವ ವಿಧಾನ;

ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.

  • ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
  • ಇ-ಮೇಲ್ ಐಡಿ, ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ.
  • ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೊಲಿಗೆ ಯಂತ್ರ ವಿತರಣೆ ಯೋಜನೆ ಅರ್ಜಿಯನ್ನು ಹುಡುಕಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Free Sewing Machine Scheme 2025 Online Form LinkApply Now
Official Websitedbcdc.karnataka.gov.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

8 thoughts on “Free Holige Yantra 2025: ಈ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ, ಅರ್ಜಿ ಆಹ್ವಾನ”

Leave a Comment