ಕರ್ನಾಟಕ ರಾಜ್ಯ ಸರ್ಕಾರವು ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ 756 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop) ನೀಡುವುದಾಗಿ ಘೋಷಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು 204 ವಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಕ್ಷೇತ್ರಶಿಕ್ಷಣಾಧಿಕಾರಿ ವಲಯದ ಮೂರು ವಿದ್ಯಾರ್ಥಿಗಳು ಒಳಗೊಂಡಂತೆ 756 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:
- ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
- ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
- ಕುಟುಂಬದ ಆದಾಯವು ಸರ್ಕಾರ ನಿಗದಿಪಡಿಸಿದ ನಿರ್ದಿಷ್ಟ ಮಿತಿಗಿಂತ ಕಡಿಮೆಯಿರಬೇಕು.
- ವಿದ್ಯಾರ್ಥಿಗಳು ಪಿಯುಸಿ, ಪಾಲಿಟೆಕ್ನಿಕ್, ಐಟಿಐ ಡಿಪ್ಲೊಮಾ ಕೋರ್ಸ್‌ಗಳು ಅಥವಾ ಪ್ರಥಮ ವರ್ಷದ ಪದವಿ ಕಾರ್ಯಕ್ರಮಗಳಂತಹ ಮಾನ್ಯತೆ ಪಡೆದ ಉನ್ನತ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು.
ಕ್ಷೇತ್ರಶಿಕ್ಷಣಾಧಿಕಾರಿ ವಲಯದ ಮೂರು ವಿದ್ಯಾರ್ಥಿಗಳು ಹಾಗೂ ಪ್ರತಿ ಜಿಲ್ಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಆಧಾರ್ ಕಾರ್ಡ್
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
- ಮುಂದಿನ ಕೋರ್ಸ್‌ಗೆ ಪ್ರವೇಶ ಪಡೆದ ದಾಖಲೆಗಳು.
- ಆದಾಯ ಪ್ರಮಾಣಪತ್ರ,
- ಜಾತಿ ಪ್ರಮಾಣಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಹಾಗೂ ಇತರೆ ದಾಖಲಾತಿಗಳು
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ತಮ್ಮ ಶಾಲೆ ಅಥವಾ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಒದಗಿಸಲಾದ ಅರ್ಜಿ ನಮೂನೆಯನ್ನು ಪಡೆದು. ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ನಮೂದಿಸಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
- ನಂತರ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.
- ನಂತರ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಶಾಲಾ ಅಥವಾ ಕಾಲೇಜುಗಳ ಮೂಲಕ ಅಥವಾ ನೇರವಾಗಿ ಜಿಲ್ಲಾ ಶಿಕ್ಷಣ ಕಚೇರಿಗಳ ಮೂಲಕ ವಿತರಿಸಲಾಗುತ್ತದೆ.
ವಿಶೇಷ ಸೂಚನೆ
- ಲ್ಯಾಪ್‌ಟಾಪ್ ವಿತರಿಸಲು 3.25 ಕೋಟಿ ರೂ. ಗಳನ್ನು ಸರ್ಕಾರ ನಿಗದಿ ಪಡಿಸಿದ್ದು, ಜಿಲ್ಲಾಮಟ್ಟದಲ್ಲಿ ಲ್ಯಾಪ್ ಟಾಪ್ ಪಡೆದ ವಿದ್ಯಾರ್ಥಿಯನ್ನು ವಲಯ ಮಟ್ಟಕ್ಕೆ ಮತ್ತೆ ಪರಿಗಣಿಸುವಂತಿಲ್ಲ.
- ಶೀಘ್ರವೇ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತದೆ.
- ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ -1999ರ ನಿಯಮಗಳಿಗೆ ಒಳಪಟ್ಟು ಖರೀದಿ ಪ್ರಕ್ರಿಯೆ ನಡೆಸಲಾಗುತ್ತದೆ.
ಮತ್ತಷ್ಟು ಮಾಹಿತಿಗಾಗಿ KarnatakaHelp.inಗೆ ಭೇಟಿ ನೀಡಿ