ಹೊಸಪೇಟೆ: ತಾಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗಾಗಿ ಮೇ 11ರಿಂದ ಹತ್ತು ದಿನಗಳ ‘ಉಚಿತ ಅಣಬೆ ಬೇಸಾಯ ತರಬೇತಿ’ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಯಾವುದೇ ಜಿಲ್ಲೆಯ 18-50 ವರ್ಷ ವಯಸ್ಸಿನ ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ-ವಸತಿ ಸೌಕರ್ಯಗಳನ್ನು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣೀಕೃತ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಸಂದರ್ಶನಕ್ಕೆ ಹಾಜರಾಗಿ
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ, ಮೇ 05 (ಮಂಗಳವಾರ) ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸೊಣ್ಣಹಳ್ಳಿಪುರದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಕರೆ ಮಾಡಿ.. ನೋಂದಣಿ ಮಾಡಿ….
ನೇರ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದೆ ಇದ್ದಲ್ಲಿ ಮೇ 05 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
Important Direct Links:
| Official Website | CBRSETI |
| More Updates | KarnatakaHelp.in |