ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.19 ರಿಂದ 10 ದಿನಗಳವರೆಗೆ ಶಿಬಿರ ನಡೆಯಲಿದ್ದು, ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವಯೋಮಾನದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಊಟ, ವಸತಿ ಸೌಕರ್ಯಗಳು ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ಧಾರೆ.
Hi mam sumathi