WhatsApp Channel Join Now
Telegram Group Join Now

Free NEET JEE Pre Examination Coaching 2024-25: ಉಚಿತ NEET ಮತ್ತು JEE ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ NEET ಮತ್ತು JEE ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಹುದ್ದೆಯನ್ನು ಸಲ್ಲಿಸಬಹುದಾಗಿದೆ.

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Free Neet Jee Pre Examination Coaching 2024-25
Free Neet Jee Pre Examination Coaching 2024-25

ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳನ್ನು ಬೆಂಗಳೂರು ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮಾತ್ರ ನೀಡಲಿದ್ದು ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್‌ರೂಂ (ಆಫ್‌ಲೈನ್) ಅಥವಾ ಆನ್‌ಲೈನ್ ಮೂಲಕ ನೀಡಲಾಗುತ್ತದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ https://bcwd.karnataka.gov.in ಮೂಲಕ ಆಗಸ್ಟ್ 25ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಬಹುದಾಗಿದೆ. ಈ ಲೇಖನದಲ್ಲಿ ಉಚಿತ NEET ಹಾಗೂ JEE (MAINS & ADVANCED) ಪರೀಕ್ಷಾ ತರಬೇತಿ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ- ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 25, 2024

ವಿದ್ಯಾರ್ಹತೆ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ/10ನೇ ತರಗತಿ ಪೂರ್ಣಗೊಳಿಸಿರಬೇಕು. ಎಸ್.ಎಸ್.ಎಲ್.ಸಿ/10ನೇ ತರಗತಿಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.

ಪುಸಕ್ತ ಸಾಲಿನಲ್ಲಿ ಪ್ರಥಮ ಪಿಯುಸಿ/10+1 ರ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಎಸ್.ಎಸ್.ಎಲ್.ಸಿ/10ನೇ ತರಗತಿ ಅಂಕ ಪಟ್ಟಿ.
  • ಜಾತಿ ಮತ್ತು ಆದಾಯ ದೃಢೀಕರಣ ಪತ್ರ.
  • ವಿಶೇಷ ಚೇತನ ವಿದ್ಯಾರ್ಥಿಯಾಗಿದ್ದಲ್ಲಿ ಆ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ.
  • 2024-25ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ/10+1 (ವಿಜ್ಞಾನ ವಿಭಾಗ) ರಲ್ಲಿ ಪ್ರವೇಶ ಪಡೆದಿರುವ ಬಗ್ಗೆ ರಸೀದಿ ಪತ್ರ.

Also Read: India Post GDS 1st Merit List 2024: ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಮೆರಿಟ್ ಪಟ್ಟಿ ಶೀಘ್ರದಲ್ಲೇ ಬಿಡುಗಡೆ

How to Apply for Free NEET JEE Pre Examination Coaching 2024-25

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ https://bcwd.karnataka.gov.in ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಿಗದಿತ ಕಾಲೇಜು ದೃಢೀಕರಣ ಪತ್ರವನ್ನು ಆನ್ ಲೈನ್ ನಲ್ಲಿ ನೀಡಲಾಗಿದ್ದು ಅದನ್ನು ಭರ್ತಿ ಮಾಡಿ ಕಾಲೇಜಿನ ಪ್ರಿನ್ಸಿಪಾಲ್ ಬಳಿ ಕಹಿ ಮತ್ತು ದೃಢೀಕರಣ ಮಾಡಿಸಿ ಅಪ್ಲೋಡ್ ಮಾಡಬೇಕು.

ಸಹಾಯ ವಾಣಿ: 8050370004 (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಬಹುದು.

Important Direct Links:

Free NEET JEE Pre Examination Coaching 2024-25 Notification PDFDownload
Free NEET JEE Coaching 2024-25 Application Form LinkApply Here
Official Websitebcwd.karnataka.gov.in
More UpdatesKarnataka Help.in

Leave a Comment