ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ

ಫಾಲೋ ಮಾಡಿ
Free Photography and Videography Training 2025
Free Photography and Videography Training 2025

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ. ಸಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಅವರು, ತರಬೇತಿ ನ.13ರಿಂದ ಪ್ರಾರಂಭವಾಗಲಿದೆ. ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ, ಕನ್ನಡ ಓದಲು ಮತ್ತು ಬರೆಯಲು ಬರುವ 18 ರಿಂದ 45 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಪಾಲ್ಗೊಳ್ಳಬಹುದು. ಉಚಿತ ತರಬೇತಿ ಜೊತೆಗೆ ಊಟ-ವಸತಿ ಸೌಲಭ್ಯ ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಫಲಾನುಭವಿಗಳಿಗೆ ಮೊದಲ ಆದ್ಯತೆ. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment