ಪುರುಷರೇ ಗಮನಿಸಿ: ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ

Published on:

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜೂ.03 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಓದಲು-ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯಸ್ಸಿನ ಪುರುಷರು ಪಾಲ್ಗೊಳ್ಳಬಹುದಾಗಿದೆ. ಉಚಿತ ತರಬೇತಿ ಜೊತೆಗೆ ಊಟ-ವಸತಿ ಸೌಕರ್ಯಗಳು ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಏನೇನು ಕಲೆಯುವಿರಿ.?

ಶಿಬಿರದಲ್ಲಿ, ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯೊಂದಿಗೆ ಗಿಂಬಲ್‌ ಹಾಗೂ ಡ್ರೋನ್‌ ಬಳಕೆ, ಮಾಡೆಲ್‌ ಫೋಟೋ ಶೂಟ್‌, ಪ್ರಾಡೆಕ್ಟ್‌ ಫೋಟೋಗ್ರಫಿ, ಔಟ್‌ ಡೋರ್‌ ಫೋಟೋಶೂಟ್‌, ಸ್ಟುಡಿಯೋ ಸೆಟ್‌ ಅಫ್‌, ಫ್ರೀ ವೆಡ್ಡಿಂಗ್‌ ಶೂಟ್‌, ವೆಡ್ಡಿಂಗ್‌ ಶೂಟ್‌, ಫೋಟೋ ಮತ್ತು ವಿಡಿಯೋ ಎಡಿಟಿಂಗ್‌, ಫೋಟೋಶಾಪ್‌, ಕರಿಷ್ಮಾ ಆಲ್ಬಂ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುವುದು.

ಆಸಕ್ತರು ಹಾಜರಾಗಿ…

ಆಸಕ್ತಿಯುಳ್ಳ ಅಭ್ಯರ್ಥಿಗಳು ಜೂ.03(ಬುಧವಾರ) ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ದಿನಾಂಕ: 03/06/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Important Direct Links:

Official WebsiteCBRSETI
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

Leave a Comment