ಡಿ.22 ರಿಂದ ಉಚಿತ ಫೋಟೋಗ್ರಫಿ, ವಿಡಿಯೋಗ್ರಫಿ ತರಬೇತಿ ಶಿಬಿರ

Published on:

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರಿಗೆ ಡಿ.22 ರಿಂದ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

18 ರಿಂದ 45 ವರ್ಷ ವಯೋಮಾನದ ರಾಜ್ಯದ ಯಾವುದೇ ಜಿಲ್ಲೆಯ ಪುರುಷರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು-ಬರೆಯಲು ತಿಳಿದಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡು ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಶಿಬಿರದ ಸಮಯದಲ್ಲಿ ಊಟ, ವಸತಿ ಸೌಲಭ್ಯ ಒದಗಿಸಲಾಗುವುದು. ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣೀಕೃತ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ನೋಂದಣಿ ಮಾಡುವುದು ಹೇಗೆ, ಎಲ್ಲಿ.?

ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಡಿ.15 ಗುರುವಾರ ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಅಥವಾ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳು ಡಿ.15ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕ ಹೊರಡಿಸಿದೆ ಪ್ರಕಟಣೆ ತಿಳಿಸಿದೆ.

Important Direct Links:

Official WebsiteCBRSETI
More UpdatesKarnatakaHelp.in

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment