ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಕಾಲ ಪೊಲೀಸ್ ಕಾನ್ಸ್ಟೇಬಲ್ (Police Constable)ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ ಭೇಟಿ ನೀಡಿ. ಅ.3ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 22, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 03, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಅಭ್ಯರ್ಥಿಯು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ. ಮೀರಿರಬಾರದು.
• ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ವಿದ್ಯಾರ್ಹತೆ:
ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
03-10-2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 27 ವರ್ಷಗಳು
ತರಬೇತಿಯ ಅವಧಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ 60 ದಿನಗಳ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ – 8277799990 ಇವರನ್ನು ಸಂಪರ್ಕಿಸಬಹುದು.