Free Professional Equipment and Sewing Machine Online Application Form 2025
ಕೋಲಾರ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜಿಲ್ಲಾ ವಲಯದ ಗ್ರಾಮೀಣ ಪ್ರದೇಶದ ಅನುವಂಶಿಕ ಕುಶಲಕರ್ಮಿಗಳಿಗೆ “ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ” ವಿದ್ಯುತ್ ಚಾಲಿತ ಬಡಗಿ ಉಪಕರಣ ಹಾಗೂ ಗಾರೆ, ಕ್ಷೌರಿಕ, ಕುಲುಮೆ, ಕಲ್ಲುಕುಟುಕ ಮತ್ತು ದೋಬಿ ಕಸುಬುಗಳ ಸುಧಾರಿತ ಉಪಕರಣ ಹಾಗೂ “ಜಿಲ್ಲಾ ಉದ್ಯಮ ಕೇಂದ್ರಯೋಜನೆಯಡಿ” ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ. ಸದರಿ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲಾರ ಜಿಲ್ಲಾ ಪಂಚಾಯುತ್ ಅಧಿಕೃತ ವೆಬ್ ಸೈಟ್ https://kolar.nic.in/en/ಗೆ ಭೇಟಿ ನೀಡಿ. ಡಿಸೆಂಬರ್ 15 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
• ಸದರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿದಾರರು ಕನಿಷ್ಠ ಓದು ಬರಹ ಬಲ್ಲವರಾಗಿರಬೇಕು.
• ಒಂದು ಕುಟುಂಬದಲ್ಲಿ ಓರ್ವ ಅಭ್ಯರ್ಥಿಯು ಒಂದು ಯೋಜನೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
• ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರ/ಸುಧಾರಿತ ಉಪಕರಣವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
• ಸರ್ಕಾರಿ ನೌಕರರು ಅಥವಾ ಅವರ ಅವಲಂಭಿತರು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು:
ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ/ಎಸ್.ಎಸ್.ಎಲ್.ಸಿ., ಅಂಕಪಟ್ಟಿ/ಇನ್ನಿತರ ಪ್ರಮಾಣ ಪತ್ರ) ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಪಡಿತರ ಚೀಟಿ
ಅರ್ಜಿ ಸಲ್ಲಿಸುವ ವಿಧಾನ:
• ಕೋಲಾರ ಜಿಲ್ಲೆಯ ಅಧಿಕೃತ ವೆಬ್ ಸೈಟ್ https://kolar.nic.in/en/ ಗೆ ಭೇಟಿ ನೀಡಿ.
• ನಂತರ ಇತ್ತೀಚಿನ ಸುದ್ದಿಗಳು ವಿಭಾಗದಲ್ಲಿ ನೀಡಲಾಗಿರುವ “ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಹಾಗೂ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಕೋಲಾರ ಜಿಲ್ಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪನಿರ್ದೇಶಕರು ರವರ ಕಛೇರಿ ದೂರವಾಣಿ ಸಂಖ್ಯೆ 08152-222819 ಅನ್ನು ಸಂಪರ್ಕಿಸಬಹುದು.