ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಸಲಕರಣೆ ನೀಡಲು ಅರ್ಜಿ ಆಹ್ವಾನ
ಕಲಬುರಗಿ: ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸಲಕರಣೆಗಳ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ಬಡಗಿತನ ಹಾಗೂ ಗೌಂಡಿ ವೃತ್ತಿಯ ಉಪಕರಣಗಳನ್ನು ವಿತರಿಸಲಾಗುತ್ತದೆ. ಸದರಿ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://kalaburagi.nic.in/en/ಗೆ ಭೇಟಿ ನೀಡಿ. ಅ.25 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಗೌಂಡಿ ವೃತ್ತಿಯ ಉಪಕರಣ ಸೌಲಭ್ಯ ಪಡೆಯಲು ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗದ ಗ್ರಾಮೀಣ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
• ಬಡಗಿತನ ವೃತ್ತಿಯ ಉಪಕರಣ ಸೌಲಭ್ಯ ಪಡೆಯಲು ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
• ಒಂದು ಕುಟುಂಬದಲ್ಲಿ ಅಭ್ಯರ್ಥಿಯು ಒಂದೇ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
• ಸರ್ಕಾರದ ಯಾವುದೇ ಇತರೆ ಯೋಜನೆಯಡಿ ಈಗಾಗಲೇ ಬಡಗಿತನ ಹಾಗೂ ಗೌಂಡಿ ವೃತ್ತಿಯ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
• ಸರ್ಕಾರಿ ನೌಕರಿಯಲ್ಲಿರುವವರು ಅಥವಾ ಅವರ ಅವಲಂಬಿತರು ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:
• ಪಾಸ್ಪೋರ್ಟ್ ಅಳತೆಯ ಭಾವಚಿತ್ರ
• ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ/ಎಸ್.ಎಸ್.ಎಲ್.ಸಿ., ಅಂಕಪಟ್ಟಿ/ ಇನ್ನಿತರ ಪ್ರಮಾಣ ಪತ್ರ)
• ಜಾತಿ ಪ್ರಮಾಣ ಪತ್ರ
• ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ
• ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕೈಗಾರಿಕಾ ವಿಸ್ತರಣಾಧಿಕಾರಿಯವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ
ಆಯ್ಕೆ ವಿಧಾನ:
ಸದರಿ ಯೋಜನೆಯಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿಗದಿಪಡಿಸಿರುವ ಗುರಿಗಿಂತ ಅಧಿಕ ಅರ್ಹ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ, ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
• ಯೋಜನೆಯ ಅರ್ಜಿ ನಮೂನೆಯ ಅಧಿಕೃತ ವೆಬ್ ಸೈಟ್ https://nicforms.nic.in/enRhYmxlNjhhMmM4MTE5YzlhZDIwMjUwODE4NzM= ಗೆ ಭೇಟಿ ನೀಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರು (ಗ್ರಾಮೀಣ ಕೈಗಾರಿಕೆ) ಕಛೇರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ, ಕಲಬುರಗಿ, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ವಿಶೇಷ ನಿವೇಶನ ಸಂಖ್ಯೆ:ಎಸಪಿಎಲ್-16, ಕೈಗಾರಿಕಾ ವಸಾಹತು, ಜೀವರ್ಗಿ ಕ್ರಾಸ್, ಎಂ.ಎಸ್.ಕೆ. ಮಿಲ್ಸ್ ರಸ್ತೆ, ಕಲಬುರಗಿ ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿ ಅವರನ್ನು ಸಂಪರ್ಕಿಸಬಹುದಾಗಿದೆ.