WhatsApp Channel Join Now
Telegram Group Join Now

Free PUC Admission 2024-25: ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Free PUC Admission 2024-25: 2024-25ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕರ್ನಾಟಕದ ವಿವಿಧ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಶಾಲೆಯಲ್ಲಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಉನ್ನತೀಕರಣಗೊಂಡ) ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಇ) ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ. (ಉನ್ನತೀಕರಣಗೊಂಡ) ಇಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್) ಪ.ಜಾ, ಪ.ಪಂ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಸದರಿ ಕಾಲೇಜಿಗೆ ಭೇಟಿ ನೀಡಿ ಅರ್ಜಿಸಲ್ಲಿಸಬೇಕು.

Free Puc Admission 2024-25
Free Puc Admission 2024-25

Eligibility Criteria for Free PUC Admission 2024-25

ಅರ್ಹತೆ;

  • ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು ಅಂದರೆ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ.75 ರಷ್ಟು ಪ್ರವೇಶ ಮೀಸಲಿರಿಸಿದೆ.
  • ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ, ಸರ್ಕಾರಿ, ಸರಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ರೂ.ಗಳ ಮೀರಿರಬಾರದು.
  • ವಿಕಲಚೇತನರಿಗೆ ಶೇ.3 ರಷ್ಟು ಪ್ರವೇಶ ಮೀಸಲಿರಿಸಿದೆ. ಶೇ.25 ರಷ್ಟು ಸ್ಥಾನ ಹಿಂದುಳಿದ, ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಮೀಸಲಿರಿಸಿದೆ.

Last Date of Karnataka Free PUC Admission 2024-25

ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ನಿಮ್ಮ ಜಿಲ್ಲೆಯ/ತಾಲ್ಲೂಕಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಥವಾ ನಿಮ್ಮ ಜಿಲ್ಲೆಯ/ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಭೇಟಿ ನೀಡಿ. (ಉನ್ನತೀಕರಣಗೊಂಡ) ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ 2024 ಮೇ 27ರ ಒಳಗೆ ಅರ್ಜಿಸಲ್ಲಿಸಬೇಕು.

Also Read: Karnataka ITI Admission 2024: ITI ಪ್ರವೇಶ ಪ್ರಕ್ರಿಯೆ ಆರಂಭ; ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಓದಿ

Free PUC Education Facilities 2024-25

ವಸತಿ ಕಾಲೇಜುಗಳಲ್ಲಿ ಒದಗಿಸಲಾಗುವ ಸೌಲಭ್ಯಗಳು;

  • ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
  • ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB & PCMCs ಸಂಯೋಜನೆಗಳ ತರಗತಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು.
  • ವೃತ್ತಿಪರ ಕೋರ್ಸುಗಳ (NEETT, JEE Mains & Advanced, KCET, CLAT, CA Foundation) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿ ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಕೊಠಡಿ, ಸಂಖ್ಯೆ ಸಿ-7, ಮೊದಲನೇ ಮಹಡಿ, ಜಿಲ್ಲಾ ಕಛೇರಿಗಳ ಸಂಕೀರ್ಣ (ಮಿನಿ ವಿಧಾನ ಸೌಧ) ಚಿತ್ತಾಪುರ ರಸ್ತೆ, ಯಾದಗಿರಿ, ಕಛೇರಿ ದೂ.ಸಂ.08473 253235, ಬಾಲಛೇಡ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲರು ಮೊ.ನಂ.9449246564, 9900716156, ಶಹಾಪುರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮೊ.ನಂ.9901720962, 8310948029, ಶಹಾಪುರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ನಂ. 8095971486, ಸುರಪುರ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ನಂ.7022196113, ಯಾದಗಿರಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ನಂ.9731090143 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Important Links:

Join TelegramClick Here
More UpdatesKarnatakaHelp.in

Leave a Comment