ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಫಾಲೋ ಮಾಡಿ
Free Sheep and Goat Farming Training 2025
Free Sheep and Goat Farming Training 2025

ಬೆಂಗಳೂರು ಗ್ರಾಮಾಂತರ: ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್‌ 27 ರಿಂದ 13 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಎಲ್ಲಾ ಜಿಲ್ಲೆಯ 18-45 ವಯೋಮಾನದ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ತರಬೇತಿ ಸಮಯದಲ್ಲಿ ಊಟ, ವಸತಿ ಸೌಲಭ್ಯ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment