ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರ

Published on:

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ ತಿಂಗಳ ಮೂರನೆಯ ವಾರದಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವಯೋಮಾನದ ಪುರುಷ ಮತ್ತು ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಜೊತೆಗೆ ಊಟ-ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಸಂದರ್ಶನಕ್ಕೆ ಕರೆ….

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 (ಸೋಮವಾರ) ಬೆಳಗ್ಗೆ 9:00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರದಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿಕೆಂದು ಸೂಚಿಸಲಾಗಿದೆ.

ಅಭ್ಯರ್ಥಿಯು ಕಾರಣಾಂತರಗಳಿಂದ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗೆಯಿದ್ದಲ್ಲಿ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 636313912̧3, 9686248369 ಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Important Direct Links:

Official WebsiteCBRSETI
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

2 thoughts on “ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರ”

Leave a Comment