Free Skill Training Program 2024: ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ‌ ಆಹ್ವಾನ

Published on:

Updated On:

ಫಾಲೋ ಮಾಡಿ
Free Skill Training Program 2024
Free Skill Training Program 2024

ಯಾದಗಿರಿ ಜಿಲ್ಲಾಡಳಿತ ವತಿಯಿಂದ ಉಚಿತ ವಿವಿಧ ಕೌಶಲ್ಯ ತರಬೇತಿಗಳಗೆ‌ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯ ಮಹತ್ವಕಾಂಕ್ಷಿ ಯೋಜನೆಯಡಿ ಕಡೆಚೂರು ಕೈಗಾರಿಕಾ ಪ್ರದೇಶಕ್ಕೆ ಜಮೀನು ನೀಡಿದ ರೈತರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ನಿರುದ್ಯೋಗ ಯುವಕ-ಯುವತಿಯರಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ವಿಷಯಗಳಲ್ಲಿ ಉಚಿತವಾಗಿ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ.

ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಹಾಗೂ ತರಬೇತಿ ಅವಧಿಯಲ್ಲಿ ಯಾವುದೇ ಸ್ಟೆಪೆಂಡ್ ನೀಡಲಾಗುವುದಿಲ್ಲ. ಅರ್ಜಿಯನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಯಾದಗಿರಿ/ಪ್ರಾಂಶುಪಾಲರು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (GTTC) ಕಡೆಚೂರು ಅಥವಾ www.yadgir.nic.in ಮುಖಾಂತರ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಹತೆ ದಾಖಲಾತಿಗಳು, ಆಧಾರ ಗುರುತಿನ ಚೀಟಿ, ಕಡೆಚೂರು ಕೈಗಾರಿಕಾ ಪ್ರದೇಶಕ್ಕೆ ಜಮೀನು ನೀಡಿರುವ ದಾಖಲೆ ಹಾಗೂ ಜಾತಿ ಪ್ರಮಾಣ ಪತ್ರಗಳೊಂದಿಗೆ ದಿನಾಂಕ 25.06.2024 ರೊಳಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕೊಠಡಿ ಸಂ. ಎ-12, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಇಲ್ಲಿಗೆ ಸಲ್ಲಿಸಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment