ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ(MoRD) ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂವರ್ಧನ ಸಂಸ್ಥೆ (ಸಂಜೀವಿನಿ-KSRLPS) ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿಆರ್ ಎಸ್ಇಟಿಐ)ಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.22 ರಿಂದ ತರಬೇತಿ ಪ್ರಾರಂಭವಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಯ 18 ರಿಂದ 45 ವರ್ಷ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಸ್ಥಳಿಯ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ಹಾಗೂ ವಸತಿ ಸೌಕರ್ಯಗಳು ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ತರಬೇತಿ ನಂತರ ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.